English   Kannada   Malayalam   Tamil   
ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ
| ಪ್ರಕೃತಿ : | 10 ಮೀ.ವರೆವಿಗೆ ಬೆಳೆಯುವ ಮರಗಳು. |
| ಕಾಂಡ ಮತ್ತು ತೊಗಟೆ : | ತೊಗಟೆ ನಯವಾಗಿರುತ್ತದೆ. |
| ಕವಲುಗಳು ಮತ್ತು ಕಿರುಕೊಂಬೆಗಳು : | ಎಳೆಯ ಕಿರುಕೊಂಬೆಗಳು ದುಂಡಾಗಿರುತ್ತವೆ ಮತ್ತು ತುಕ್ಕು ಬಣ್ಣದ ದಟ್ಟವಾದ ಮೃದುತುಪ್ಪಳದಿಂದ ಕೂಡಿರುತ್ತವೆ. |
| ಎಲೆಗಳು : | ಎಲೆಗಳು ಸರಳವಾಗಿದ್ದು, ಪರ್ಯಾಯ ಮತ್ತು ಸುತ್ತು ಜೋಡಣಾ ಉಪತರಂಗಿತ ವ್ಯವಸ್ಥೆಯಲ್ಲಿರುತ್ತವೆ; ತೊಟ್ಟುಗಳು 2.5 ಸೆಂ.ಮೀ. ವರೆಗಿನ ಉದ್ದ ಹೊಂದಿದ್ದು ದುಂಡಾಕಾರದಲ್ಲಿದ್ದು ತುಕ್ಕು ವರ್ಣದ ದಟ್ಟ ಮೃದು ತುಪ್ಪಳದಿಂದ ಕೂಡಿರುತ್ತವೆ; ಪತ್ರಗಳು 12-27 x 4-6.5 ಸೆಂ.ಮೀ ಗಾತ್ರ ಹೊಂದಿದ್ದು,ಸಂಕುಚಿತ- ಅಂಡವೃತ್ತದಿಂದ ಬುಗುರಿಯವರೆಗಿನ ಆಕಾರದಲ್ಲಿರುತ್ತವೆ. ಪತ್ರದ ತುದಿ ಕ್ರಮೇಣ ಚೂಪಾಗುವ ಮಾದರಿಯಲ್ಲಿದ್ದು ,ಬೆಣೆಯಾಕಾರದಿಂದ ಚೂಪದ ಮಾದರಿವರೆಗಿನ ಬುಡ ಹೊಂದಿರುತ್ತವೆ;ಪತ್ರಗಳ ಅಂಚು ತರಂಗಿತವಾಗಿರುತ್ತದೆ;ಮೇಲ್ಮೈ ಕಾಗದವನ್ನೋಲುವ ಮಾದರಿಯಲ್ಲಿದ್ದು ಮಾಸಲು ಬೂದು ಹಸಿರು ಬಣ್ಣ ಹೊಂದಿರುತ್ತದೆ;ಪತ್ರಗಳು ಎಳೆಯದಾಗಿದ್ದಾಗ ನಸುಗೆಂಪಿನಿಂದ ಕೂಡಿದ ಹಳದಿ ಬಣ್ಣಹೊಂದಿದ್ದು ನಂತರ ಪತ್ರದ ತಳ ಭಾಗದ ಮಧ್ಯನಾಳ ಹೊರತುಪಡಿಸಿ ಮಿಕ್ಕೆಲ್ಲಾ ಭಾಗಗಳು ರೋಮರಹಿತವಾಗಿರುತ್ತವೆ; ಮಧ್ಯನಾಳ ಮೇಲೆದ್ದಿರುತ್ತದೆ; ಎರಡನೇ ದರ್ಜೆಯ ನಾಳಗಳು ಅಂದಾಜು 7 -10 ಜೋಡಿಗಳಿರುತ್ತವೆ;ಮೂರನೇ ದರ್ಜೆಯ ನಾಳಗಳು ಹೆಚ್ಚೂ ಕಡಿಮೆ ತೀರಾ ಸನಿಹವಾಗಿದ್ದು ಲಂಬರೇಖೆಗೆ ಸಮಕೋನದಲ್ಲಿದ್ದು ಎಲೆದಿಂಡಿಗೆ ಅಡ್ಡವಾಗಿ ಕೂಡುವಂತಿದ್ದು ಪ್ರಮುಖವಾಗಿರುವುದಿಲ್ಲ. |
| ಪುಷ್ಪಮಂಜರಿ/ಹೂಗಳು : | ಹೂಗಳು ಏಕಲಿಂಗಿಗಳಾದ್ದು, ಪ್ರತ್ಯೇಕ ಸಸ್ಯಗಳಲ್ಲಿರುತ್ತವೆ;ಹೆಣ್ಣು ಹೂಗಳು ಕಿರಿದಾದ ವೃಂತವುಳ್ಳ ಪೀಠಛತ್ರ ಪುಷ್ಪಮಂಜರಿಯಲ್ಲಿರುತ್ತವೆ. |
| ಕಾಯಿ /ಬೀಜ : | ಬೆರ್ರಿಗಳು ಗೋಳಾಕಾರದಲ್ಲಿದ್ದು 1 ಸೆಂ.ಮೀ.ವರೆಗಿನ ಅಡ್ಡಗಳತೆ ಹೊಂದಿರುತ್ತವೆ ಮತ್ತು ಒಂದು ಬೀಜವನ್ನೊಳಗೊಂಡಿರುತ್ತವೆ. |