ಅಲ್ಸಿಯೋಡ್ಯಾಫ್ನೆ ಸೆಮೆಕಾರ್ಪಿಫೋಲಿಯ Nees var. ಪಾರ್ವಿಫೋಲಿಯ J.Hk. - ಲಾರೇಸಿ

:

English   Kannada   Malayalam   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : 8 ಮೀ.ವರೆವಿಗೆ ಬೆಳೆಯುವ ಮರಗಳು.
ಕಾಂಡ ಮತ್ತು ತೊಗಟೆ : ತೊಗಟೆ ಬೂದು ಬಣ್ಣದಲ್ಲಿರುತ್ತದೆ ಸೀಳಿಕಾ ಮಾದರಿಯಲ್ಲಿರುತ್ತದೆ; ಕಚ್ಚು ಮಾಡಿದ ಜಾಗ ಬಿಳಿ ಬಣ್ಣದಲ್ಲಿದ್ದು ಕಿತ್ತಳೆ ಬಣ್ಣದ ಮಚ್ಚೆಗಳನ್ನು ಹೊಂದಿರುತ್ತದೆ.
ಕವಲುಗಳು ಮತ್ತು ಕಿರುಕೊಂಬೆಗಳು : ಕಿರುಕೊಂಬೆಗಳು ಉಪ-ದುಂಡಾಕಾರದಲ್ಲಿದ್ದು ವಾಯುವಿನಿಮಯ ಬೆಂಡು ರಂಧ್ರಗಳ ಸಮೇತವಿದ್ದು ರೋಮರಹಿತವಾಗಿರುತ್ತವೆ.
ಎಲೆಗಳು : ಎಲೆಗಳು ಸರಳವಾಗಿದ್ದು,ಪರ್ಯಾಯ ಮತ್ತು ಸುತ್ತು ಜೋಡನಾ ವ್ಯವಸ್ಥೆಯಲ್ಲಿದ್ದು ಕುಡಿಕೊಂಬೆಗಳ ತುದಿಯಲ್ಲಿರುತ್ತವೆ; ತೊಟ್ಟುಗಳು 0.5- 2 ಸೆಂ.ಮೀ. ವರೆಗಿನ ಉದ್ದ ಹೊಂದಿದ್ದು ಅಡ್ಡ ಸೀಳಿದಾಗ ಸಪಾಟ ಪೀನ ಮಧ್ಯದ ಆಕಾರದಲ್ಲಿರುತ್ತವೆ ಮತ್ತು ರೋಮರಹಿತವಾಗಿರುತ್ತವೆ; ಪತ್ರಗಳು 4-11 ´ 2-4 ಸೆಂ.ಮೀ ಗಾತ್ರ ಹೊಂದಿದ್ದು ಬುಗುರಿಯ ಆಕಾರದಲ್ಲಿರುತ್ತವೆ. ಪತ್ರದ ತುದಿ ಚೂಪಲ್ಲದ ಅಥವಾ ದುಂಡಾಗಿರುವ ಮಾದರಿಯಲ್ಲಿರುತ್ತದೆ, ಬುಡ ಬೆಣೆಯಾಕಾರದಿಂದ ಚೂಪಾದ ಮಾದರಿಯಲ್ಲಿರುತ್ತದೆ; ಅಂಚು ನಯವಾಗಿರುತ್ತದೆ;ಪತ್ರಗಳ ಮೇಲ್ಮೈತೊಗಲನ್ನೋಲುವ ಮಾದರಿಯಲ್ಲಿದ್ದು ರೋಮರಹಿತವಾಗಿರುತ್ತದೆ ಮತ್ತು ತಳಭಾಗದಲ್ಲಿ ಮಾಸಲು ಬೂದು ಹಸಿರು ಬಣ್ಣ ಹೊಂದಿರುತ್ತದೆ;ಮಧ್ಯನಾಳ ಪತ್ರದ ಮೇಲ್ಭಾಗದಲ್ಲಿ ತುಸು ಮೇಲೆದ್ದಿರುತ್ತದೆ; ಎರಡನೇ ದರ್ಜೆಯ ನಾಳಗಳು 6-9 ಜೋಡಿಗಳಿದ್ದು ಕವಲೊಡೆದಿರುತ್ತವೆ ಮತ್ತು ಆರೋಹಣ ಮಾದರಿಯಲ್ಲಿರುತ್ತವೆ.ಮೂರನೇ ದರ್ಜೆಯ ನಾಳಗಳು ಜಾಲಬಂಧ ನಾಳ ವಿನ್ಯಾಸ ಹೊಂದಿದ್ದು ಎಲೆದಿಂಡಿಗೆ ಅಡ್ಡವಾಗಿ ಕೂಡುವ ರೀತಿಯವು.
ಪುಷ್ಪಮಂಜರಿ/ಹೂಗಳು : ಪುಷ್ಪಮಂಜರಿಗಳು ಪುನರಾವೃತ್ತಿಯಾಗಿ ಕವಲೊಡೆಯುವ ಮಾದರಿಯವು.
ಕಾಯಿ /ಬೀಜ : ಬೆರ್ರಿಗಳು ಅಂಡವೃತ್ತದ ಆಕಾರದಲ್ಲಿದ್ದು 2.5 ಸೆಂ.ಮೀ. ಉದ್ದ ಹೊಂದಿರುತ್ತವೆ ಮತ್ತು ಒಂದು ಬೀಜವನ್ನೊಳಗೊಂಡಿರುತ್ತವೆ.

ಜೀವಪರಿಸ್ಥಿತಿ :

1200 ಮತ್ತು 1600 ಮೀ. ನಡುವಿನ ಎತ್ತರದವರೆಗಿನ ಪ್ರದೇಶಗಳ ತೆರೆದ ನಿತ್ಯ ಹರಿದ್ವರ್ಣ ಕಾಡುಗಳಲ್ಲಿ ಈ ಪ್ರಬೇದ ಕಂಡುಬರುತ್ತದೆ.

ವ್ಯಾಪನೆ :

ಪಶ್ಚಿಮ ಘಟ್ಟಕ್ಕೆ ಸೀಮಿತವಾದ ಈ ಪ್ರಭೇದ ದಕ್ಷಿಣ ಸಹ್ಯಾದ್ರಿಯಲ್ಲಿ ಕಂಡುಬರುತ್ತದೆ.

ಗ್ರಂಥ ಸೂಚಿ :

Wall., Pl. Asiat.. Rar. 2: 72.1831 ;Gamble,Fl.Madras 2:1226. 1993(rep.ed.); Sasidharan, Biodiversity documentation for Kerala Plants, part 6, 395.2004

Top of the Page