ಕ್ಯಾಂತಿಯಮ್ ಟ್ರವಂಕೊರಿಕಮ್ J.Hk. - ರೂಬಿಯೇಸಿ

Synonym : ಪ್ಲೆಕ್ಟ್ರೋನಿಯ ಟ್ರವಂಕೊರಿಕ Bedd.; ಸೈಡ್ರ್ಯಾಕ್ಸ್ ಟ್ರವಂಕೊರಿಕ (Bedd.) Sashidh.  

English   Kannada   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : 15 ಮೀ. ಎತ್ತರದವರೆಗಿನ ಸಣ್ಣ ಗಾತ್ರದ ಮರಗಳು.
ಕಾಂಡ ಮತ್ತು ತೊಗಟೆ : ತೊಗಟೆ ಬೆಂಡು ರೂಪ ಹೊಂದಿದ್ದು,ಆಳವಾದ ಸೀಳಿಕಾ ಮಾದರಿಯಲ್ಲಿರುತ್ತದೆ;ಕಚ್ಚು ಮಾಡಿದ ಜಾಗ ಹಳದಿ ಮಿಶ್ರಿತ-ಕಂದು.
ಕವಲುಗಳು ಮತ್ತು ಕಿರುಕೊಂಬೆಗಳು : ಎಳೆಯ ಕಿರುಕೊಂಬೆಗಳು ತೆಳುವಾಗಿದ್ದು 4-ಕೋನಗಳನ್ನು ಹೊಂದಿದ್ದು, ರೋಮರಹಿತವಾಗಿರುತ್ತವೆ.
ಎಲೆಗಳು : ಎಲೆಗಳು ಸರಳವಾಗಿದ್ದು ಕತ್ತರಿಯಾಕಾರದ ಅಭಿಮುಖ ಜೋಡನಾ ವ್ಯವಸ್ಥೆಯಲ್ಲಿರುತ್ತವೆ, ಕೆಲವು ವೇಳೆ 2 ಎಲೆಗಳ ಗುಂಪು ದೃಢವಾದ, ಬೆಳೆವಣಿಗೆ ನಿಂತ ಕಿರುಕೊಂಬೆಗಳ ಮೇಲೆ ಇದ್ದಂತೆ ತೋರುತ್ತವೆ; ಕಾವಿನೆಲೆಗಳು ವಿಶಾಲ ಬುಡವುಳ್ಳ ರೇಖಾತ್ಮಕ-ದಬ್ಬಳದ ಆಕಾರ ಹೊಂದಿರುತ್ತವೆ ಮತ್ತು 0.4 ಸೆಂ.ಮೀ. ಉದ್ದ ಹೊಂದಿರುತ್ತವೆ; ತೊಟ್ಟುತೆಳುವಾಗಿರುತ್ತವೆ, 0.5 ಸೆಂ.ಮೀ.ವರೆಗಿನ ಉದ್ದವಿದ್ದು,ಅಡ್ಡ ಸೀಳಿದಾಗ ಸಪಾಟ ಪೀನ ಮಧ್ಯದ ಆಕಾರ ಹೊಂದಿರುತ್ತದೆ ಮತ್ತು ರೋಮರಹಿತವಾಗಿರುತ್ತದೆ ; ಪತ್ರಗಳು 2-5 X 1.4 – 2.9 ಸೆಂ.ಮೀ. ಗಾತ್ರ, ಅಂಡವೃತ್ತದಿಂದ ಅಂಡದವರೆಗಿನ ಆಕಾರ ಹೊಂದಿದ್ದು, ಮೊಂಡಾಗ್ರವುಳ್ಳ ಕ್ರಮೇಣ ಚೂಪಾಗುವ ತುದಿ, ಚೂಪಾದುದರಿಂದ ಒಳಬಾಗಿದ ಮಾದರಿವರೆಗಿನ ಬುಡ, ನಯವಾದ ಅಂಚು,ಕಾಗದವನ್ನೋಲುವ ಮೇಲ್ಮೈ ಹೊಂದಿದ್ದು ರೋಮರಹಿತವಾಗಿರುತ್ತವೆ; ಮಧ್ಯನಾಳ ಪತ್ರದ ಮೇಲ್ಭಾಗದಲ್ಲಿ ಚಪ್ಪಟೆಯಾಗಿರುತ್ತದೆ ಅಥವಾ ತೆಳುವಾಗಿ ಉಬ್ಬಿರುತ್ತದೆ;ಎರಡನೇ ದರ್ಜೆಯ ನಾಳಗಳು 4- 6 ಜೋಡಿಗಳಿದ್ದು ತೆಳುವಾಗಿರುತ್ತವೆ ಮತ್ತು ಅಕ್ಷಾಕಂಕುಳಿನಲ್ಲಿ ರೋಮಸಹಿತವಾದ ಸೂಕ್ಷ್ಮ ಸಹಜೀವಿ ಗೂಡುಗಳನ್ನು ಹೊಂದಿರುತ್ತವೆ;ಮೂರನೇ ದರ್ಜೆಯ ನಾಳಗಳು ಜಾಲಬಂಧ ನಾಳ ವಿನ್ಯಾಸದಲ್ಲಿದ್ದು ಕೆಲವು ವೇಳೆ ಅಸ್ಪಷ್ಟವಾಗಿರುತ್ತವೆ.
ಪುಷ್ಪಮಂಜರಿ / ಹೂಗಳು : ಪುಷ್ಪಮಂಜರಿಗಳು ಅಕ್ಷಾಕಂಕುಳಿನಲ್ಲಿರುವ ಮಧ್ಯಾರಂಭಿ ಮಾದರಿಯವು;ಹೂಗಳು ಬಿಳಿ ಬಣ್ಣದವು;ತೊಟ್ಟು ತೆಳುವಾಗಿರುತ್ತದೆ.
ಕಾಯಿ / ಬೀಜ : ಡ್ರೂಪ್ಗಳು ಅಂಡವೃತ್ತದ ಆಕಾರ ಹೊಂದಿದ್ದು 0.5 ಸೆಂ.ಮೀ. ಉದ್ದವಿರುತ್ತವೆ.

ಜೀವಪರಿಸ್ಥಿತಿ :

1100 ಮೀ. ವರೆಗಿನ ಕಡಿಮೆ ಮತ್ತು ಮಧ್ಯಮ ಎತ್ತರದ ಪ್ರದೇಶಗಳಲ್ಲಿನ ನಿತ್ಯ ಹರಿದ್ವರ್ಣ ಕಾಡುಗಳ ಒಳಛಾವಣಿಯಲ್ಲಿ ಈ ಮರಗಳು ಬೆಳೆಯುತ್ತವೆ.

ವ್ಯಾಪನೆ :

ನೈರುತ್ಯ ಪಶ್ಚಿಮ ಘಟ್ಟಕ್ಕೆ ಸೀಮಿತವಾದ ಈ ಪ್ರಭೇದ ದಕ್ಷಿಣ ಸಹ್ಯಾದ್ರಿ,ಮಧ್ಯ ಸಹ್ಯಾದ್ರಿಯ ಪಾಲಕ್ಕಾಡು ಬೆಟ್ಟಗಳಿಂದ ವಯನಾಡಿನವರೆಗಿನ ಪ್ರದೇಶಗಳಲ್ಲಿ ಕಂಡುಬರುತ್ತದೆ.

ಗ್ರಂಥ ಸೂಚಿ :

Bull. Bot. Surv. India 3: 107. 1961; Gamble, Fl. Madras 2: 625. 1993 (re. ed); Sasidharan, Biodiversity documentation for Kerala- Flowering Plants, part 6: 233. 2004.

Top of the Page