English   Kannada   Tamil   
ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಸ್ಥಿತಿ ಗ್ರಂಥ ಸೂಚಿ
| ಪ್ರಕೃತಿ : | 5 ಮೀ. ಎತ್ತರದವರೆಗಿನ ಸಣ್ಣ ಗಾತ್ರದ ಮರಗಳು. |
| ಕವಲುಗಳು ಮತ್ತು ಕಿರುಕೊಂಬೆಗಳು : | ಕಿರುಕೊಂಬೆಗಳು ದುಂಡಾಗಿದ್ದು ನಸುಗೆಂಪಿನಿಂದ ಕೂಡಿದ ಹಳದಿ ಬಣ್ಣದ ಮೃದುಗೂದಲಿನ ಸಮೇತವಿರುತ್ತವೆ. |
| ಎಲೆಗಳು : | ಎಲೆಗಳು ಸರಳವಾಗಿದ್ದುಪರ್ಯಾಯ ಜೋಡನಾ ವ್ಯವಸ್ಥೆಯಲ್ಲಿದ್ದು ಕಾಂಡದ ಎರಡೂ ಕಡೆ ಎದುರು ಬದರಿನ ಲಂಬ ಸಾಲಿನಲ್ಲಿರುತ್ತವೆ;ಕಾವಿನೆಲೆಗಳು ಅಸ್ಥಿರವಾಗಿರುತ್ತವೆ;ತೊಟ್ಟುಗಳು 0.6 ರಿಂದ 1.2 ಸೆಂ.ಮೀ. ಉದ್ದವಿದ್ದು ಕಾಲುವೆಗೆರೆ ಸಮೇತವಿದ್ದು ನಸುಗೆಂಪಿನಿಂದ ಕೂಡಿದ ಹಳದಿ ಬಣ್ಣದ ಮೃದುಗೂದಲಿಂದ ಕೂಡಿರುತ್ತವೆ; ಪತ್ರಗಳು 5 – 15 X 2.5 – 5 ಸೆಂ.ಮೀ. ಗಾತ್ರವಿದ್ದು ಸಂಕುಚಿತ ಅಂಡವೃತ್ತದಿಂದ ಅಂಡವೃತ್ತ – ಚತುರಸ್ರದ ಆಕಾರ ಹೊಂದಿದ್ದು ಹಂತ ಹಂತವಾಗಿ ಕ್ರಮೇಣ ಚೂಪಾಗುವ ತುದಿ,ಚೂಪಾದ ಅಥವಾ ಬೆಣೆಯಾಕಾರದ ಬುಡ ,ಗರಗಸ ದಂತಿತವಾದ ಅಂಚು,ತೆಳು ಪದರದಂತಹ ಮೇಲ್ಮೈ ಹೊಂದಿರುತ್ತವೆ, ತಳಬಾಗದ ಮಧ್ಯನಾಳ ಮತ್ತು ಇತರೆ ನಾಳಗಳು ನಸುಗೆಂಪಿನಿಂದ ಕೂಡಿದ ಹಳದಿ ಬಣ್ಣದ ಮೃದುಗೂದಲಿಂದ ಕೂಡಿರುತ್ತವೆ,ಅಂತರ ನಡು ನಾಳಗಳು ವಿರಳವಾದ ದಟ್ಟ ಮೃದು ತುಪ್ಪಳದಿಂದ ಕೂಡಿರುತ್ತವೆ ;ಮಧ್ಯ ನಾಳ ಮೇಲ್ಭಾಗದಲ್ಲಿ ಚಪ್ಪಟೆಯಾಗಿರುತ್ತದೆ; ಎರಡನೇ ದರ್ಜೆಯ ನಾಳಗಳು 8 ರಿಂದ 12 ಜೋಡಿಗಳಿರುತ್ತವೆ;ಮೂರನೇ ದರ್ಜೆಯ ನಾಳಗಳು ವಿಶಾಲ ಜಾಲಬಂಧ ನಾಳವಿನ್ಯಾಸದಲ್ಲಿರುವ ಮಾದರಿಯಲ್ಲಿರುತ್ತವೆ. |
| ಪುಷ್ಪಮಂಜರಿ / ಹೂಗಳು : | ಪುಷ್ಪಮಂಜರಿಗಳು ಅಕ್ಷಾಕಂಕುಳಿನಲ್ಲಿರುವ ಗುಚ್ಛಗಳಲ್ಲಿರುತ್ತವೆ ಹಾಗೂ ದಟ್ಟ ಮೃದು ತುಪ್ಪಳದಿಂದ ಕೂಡಿರುತ್ತವೆ. |
| ಕಾಯಿ / ಬೀಜ : | ಸಂಪುಟ ಫಲಗಳು ಅಂಡವೃತ್ತದ ಆಕಾರದಲ್ಲಿದ್ದು 1 ಸೆಂ.ಮೀ.ವರೆಗಿನ ಉದ್ದ ಹೊಂದಿರುತ್ತವೆ ಮತ್ತು ಕಿತ್ತಳೆ ಬಣ್ಣದಲ್ಲಿರುತ್ತವೆ; ಬೀಜಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು ಕೆಂಪು ಬಣ್ಣದ ಪತ್ರೆ ಸಮೇತವಾಗಿರುತ್ತವೆ. |