ಡೈಮಾರ್ಫೋಕೇಲಿಕ್ಸ್ ಬೆಡ್ಡೋಮಿಯೈ (Benth.) Airy Shaw - ಯೂಫೊರ್ಬಿಯೇಸಿ

Synonym : ಟ್ರೈಟ್ಯಾಕ್ಸಿಸ್ ಬೆಡ್ಡೋಮಿಯೈ Benth.

English   Kannada   Malayalam   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : 8 ಮೀ. ಎತ್ತರದವರೆಗೆ ಬೆಳೆಯುವ ಮರಗಳು.
ಕಾಂಡ ಮತ್ತು ತೊಗಟೆ : ತೊಗಟೆ ಬಿಳಿ ಬಣ್ಣದಲ್ಲಿರುತ್ತದೆ; ಕಚ್ಚು ಮಾಡಿದ ಜಾಗ ಕೆಂಪು ಮಿಶ್ರಿತ ಕಂದು ಬಣ್ಣದಲ್ಲಿರುತ್ತದೆ.
ಕವಲುಗಳು ಮತ್ತು ಕಿರುಕೊಂಬೆಗಳು : ಕಿರುಕೊಂಬೆಗಳು ತೆಳುವಾಗಿದ್ದು, ದುಂಡಾಗಿರುತ್ತವೆ ಹಾಗೂ ರೋಮರಹಿತವಾಗಿರುತ್ತವೆ.
ಎಲೆಗಳು : ಎಲೆಗಳು ಸರಳವಾಗಿದ್ದು ಪರ್ಯಾಯ ಮತ್ತು ಸುತ್ತು ಜೋಡನಾ ವ್ಯವಸ್ಥೆಯಲ್ಲಿರುತ್ತವೆ; ಕಾವಿನೆಲೆಗಳು ಅತಿ ಸೂಕ್ಷ್ಮವಾಗಿದ್ದು ಉದುರಿಹೋಗುವಂತವು;ತೊಟ್ಟುಗಳು 1-15 ಸೆಂ.ಮೀ. ಉದ್ದವಿದ್ದು ಕಾಲುವೆಗೆರೆ ಸಮೇತವಿರುತ್ತವೆ ಹಾಗೂ ರೋಮರಹಿತವಾಗಿರುತ್ತವೆ; ಪತ್ರಗಳು 8 – 13 X 2.5 – 5 ಸೆಂ ಮೀ. ಗಾತ್ರ, ಅಂಡವೃತ್ತದಿಂದ ಭರ್ಜಿಯವರೆಗಿನ ಆಕಾರ ಹೊಂದಿರುತ್ತವೆ; ಪತ್ರಗಳು ಮೊಂಡಾದ ಅಗ್ರವುಳ್ಳ ಚೂಪಾದುದರಿಂದ ಕ್ರಮೇಣ ಚೂಪಾಗುವ ತುದಿ ಮತ್ತು ಚೂಪಾದ ಬುಡವನ್ನು ಹೊಂದಿರುತ್ತವೆ; ಅಂಚು ಹೆಚ್ಚು ಅಂತರ ಹೊಂದಿರುವ ದುಂಡೇಣು ಹಲ್ಲುಗಳನ್ನು ಹೊಂದಿರುತ್ತದೆ ಮತ್ತು ಹಲ್ಲುಗಳು ರಸಗ್ರಂಥಿಗಳ ಸಮೇತವಿರುತ್ತವೆ; ಮೇಲ್ಮೈ ಕಾಗದವನ್ನೋಲುವ ಮಾದರಿಯಲ್ಲಿದ್ದು ರೋಮರಹಿತವಾಗಿರುತ್ತದೆ;ಮಧ್ಯನಾಳ ಪತ್ರದ ಮೇಲ್ಭಾಗದಲ್ಲಿ ಉಬ್ಬಿರುತ್ತದೆ; ಎರಡನೇ ದರ್ಜೆಯ ನಾಳಗಳು 8-12 ಜೋಡಿಗಳಿರುತ್ತವೆ; ಮೂರನೇ ದರ್ಜೆಯ ನಾಳಗಳು ವಿಶಾಲವಾದ ಜಾಲಬಂಧ ನಾಳ ವಿನ್ಯಾಸ ಹೊಂದಿರುತ್ತವೆ.
ಪುಷ್ಪಮಂಜರಿ/ಹೂಗಳು : ಪುಷ್ಪಮಂಜರಿ ದ್ವಿಭಜನಗೊಂಡ ಮಧ್ಯಾರಂಭಿ ಮಾದರಿಯಲ್ಲಿರುತ್ತದೆ;ಹೂಗಳು ಬಿಳಿಬಣ್ಣ ಹೊಂದಿದ್ದು ಏಕಲಿಂಗಿಗಳಾಗಿರುತ್ತವೆ ಮತ್ತು ಗಂಡು ಮತ್ತು ಹೆಣ್ಣು ಹೂಗಳು ಒಂದೇ ಸಸ್ಯದಲ್ಲಿರುತ್ತವೆ; ಮಧ್ಯಾರಂಭಿ ಪುಷ್ಪ ಮಂಜರಿಯಲ್ಲಿನ ಮಧ್ಯದ ಹೂ ಹೆಣ್ಣಾಗಿದ್ದು ಉಪ-ತೊಟ್ಟನ್ನು ಹೊಂದಿರುತ್ತದೆ.
ಕಾಯಿ /ಬೀಜ : ಸಂಪುಟ ಫಲಗಳು 3 ಮರಿಫಲಗಳನ್ನು ಹೊದಿರುತ್ತವೆ, ಪ್ರತಿ ಮರಿಫಲಗಳು 2 ಹಾಲೆಗಳ ಸಮೇತವಿರುತ್ತವೆ ಮತ್ತು 3 ಬೀಜಗಳನ್ನೊಳಗೊಂಡಿರುತ್ತವೆ.

ಜೀವಪರಿಸ್ಥಿತಿ :

550 ಮತ್ತು 1200 ಮೀ. ನಡುವಿನ ಎತ್ತರದ ಪ್ರದೇಶಗಳಲ್ಲಿನ ನಿತ್ಯ ಹರಿದ್ವರ್ಣ ಕಾಡುಗಳ ಒಳಛಾವಣಿಯಲ್ಲಿ ಈ ಪ್ರಭೇದ ಬೆಳೆಯುತ್ತದೆ.

ವ್ಯಾಪನೆ :

ಪಶ್ಚಿಮ ಘಟ್ಟಕ್ಕೆ ಸೀಮಿತವಾದ ಈ ಪ್ರಭೇದ ದಕ್ಷಿಣ ಸಹ್ಯಾದ್ರಿಯ ಅಗಸ್ತ್ಯಮಲೆಯಲ್ಲಿ ಕಂಡುಬರುತ್ತದೆ..

ಗ್ರಂಥ ಸೂಚಿ :

Kew Bull. 23:124. 1969;Gamble, Fl.Madras 2:1341.1993 (rep.ed.); Sasidharan, Biodiversity documentation for Kerala – Flowering plants, part 6, 414.2004.

Top of the Page