ಡಯೋಸ್ಪೈರಾಸ್ ಘಾಟೆನ್ಸಿಸ್ Ramesh & Franceschi - ಎಬೆನೇಸಿ

English   Kannada   Malayalam   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : 25 ಮೀ. ಎತ್ತರದವರೆಗೆ ಬೆಳೆಯುವ ಮರಗಳು.
ಕಾಂಡ ಮತ್ತು ತೊಗಟೆ : ತೊಗಟೆ ನಯವಾಗಿದ್ದು ಕಪ್ಪು ಬಣ್ಣ ಹೊಂದಿರುತ್ತದೆ; ಕಚ್ಚು ಮಾಡಿದ ಜಾಗ ಕಂದು ಬಣ್ಣದಲ್ಲಿರುತ್ತದೆ.
ಕವಲುಗಳು ಮತ್ತು ಕಿರುಕೊಂಬೆಗಳು : ಕಿರುಕೊಂಬೆಗಳು ದುಂಡಾಗಿರುತ್ತವೆ, ಎಳೆಯದಾಗಿದ್ದಾಗ ಒರಟು ರೋಮಗಳಿಂದ ಕೂಡಿರುತ್ತವೆ.
ಎಲೆಗಳು : ಎಲೆಗಳು ಸರಳವಾಗಿದ್ದು ಪರ್ಯಾಯ ಹಾಗೂ ಸುತ್ತು ಜೋಡನಾ ವ್ಯವಸ್ಥೆ ಯಲ್ಲಿದ್ದು ಕಾಂಡದ ಎರಡೂ ಕಡೆಯ ಎದುರು ಬದರಿನ ಸಾಲಿನಲ್ಲಿರುತ್ತವೆ;ಎಲೆ ತೊಟ್ಟುಗಳು 0.3-1.1 ಸೆಂ.ಮೀ ಉದ್ದವಿದ್ದು ದುಂಡಾಗಿರುತ್ತವೆ; ಪತ್ರಗಳು 5.5 – 13.5 X 3 – 6 ಸೆಂ.ಮೀ. ಗಾತ್ರ, ಅಂಡವೃತ್ತದಿಂದ ಅಂಡ- ಭರ್ಜಿಯವರೆಗಿನ ಆಕಾರ,ಸಂಕುಚಿತ ಮೊಂಡಾದ ಅಗ್ರವುಳ್ಳ ಕ್ರಮೇಣ ಚೂಪಾಗುವ ತುದಿ ; ಚೂಪಾದುದರಿಂದ ಹಿಡಿದು ಒಳಬಾಗಿದ ಬುಡ ಹೊಂದಿದ್ದು ಬಲಿತಾಗ ತೊಗಲನ್ನೋಲುವ ಮೇಲ್ಮೈ ಹೊಂದಿರುತ್ತವೆ; ಮೇಲ್ಭಾಗದಲ್ಲಿ ಮಧ್ಯನಾಳ ಉಬ್ಬಿರುತ್ತದೆ;ಎರಡನೇ ದರ್ಜೆಯ ನಾಳಗಳು 3-6 ಜೋಡಿಗಳಿದ್ದು, ಕೆಲವು ವೇಳೆ ತೀರಾ ತಳದಲ್ಲಿನ ಜೋಡಿಗಳು ಅಭಿಮುಖವಾಗಿದ್ದು ತೀಕ್ಷ್ಣವಾದ ಕೋನ ಹೊಂದಿರುತ್ತವೆ; ಮೂರನೇ ದರ್ಜೆಯ ನಾಳಗಳು ಹೆಚ್ಚೂ ಕಡಿಮೆ ಎಲೆ ದಿಂಡಿಗೆ ಅಡ್ಡವಾಗಿ ಕೂಡುವಂತವು.
ಪುಷ್ಪಮಂಜರಿ/ಹೂಗಳು : ಹೂಗಳು ಏಕ ಲಿಂಗಿಗಳು; ಗಂಡು ಹೂಗಳು ಅಕ್ಷಾಕಂಕುಳಿನಲ್ಲಿನ ಮಧ್ಯಾರಂಭಿ ಪುಷ್ಪಮಂಜರಿಯಲ್ಲಿದ್ದು ಕಂದು ಬಣ್ಣದ ದಟ್ಟ ಮೃದು ತುಪ್ಪಳದಿಂದ ಕೂಡಿರುತ್ತವೆ.
ಕಾಯಿ /ಬೀಜ : ಬೆರ್ರಿಗಳು 2.5 ಸೆಂ.ಮೀ.ವರೆಗಿನ ವ್ಯಾಸ ಹೊಂದಿದ್ದು ಗೋಳಾಕಾರದಲ್ಲಿರುತ್ತವೆ; ಬೀಜಗಳು ಬೆಣೆಯಾಕಾರದಲ್ಲಿದ್ದು 1 ರಿಂದ 4 ರ ಸಂಖ್ಯೆಯಲ್ಲಿರುತ್ತವೆ.

ಜೀವಪರಿಸ್ಥಿತಿ :

1200 ಮೀ.ವರೆಗಿನ ಎತ್ತರದ ಪ್ರದೇಶಗಳಲ್ಲಿನ ತೇವಾಂಶವುಳ್ಳ ನಿತ್ಯಹರಿದ್ವರ್ಣ ಕಾಡುಗಳ ಉಪ-ಮೇಲ್ಛಾವಣಿಯಲ್ಲಿ ಈ ಸಸ್ಯ ಕಂಡುಬರುತ್ತದೆ..

ವ್ಯಾಪನೆ :

ಪಶ್ಚಿಮ ಘಟ್ಟಕ್ಕೆ ಸೀಮಿತವಾದ ಈ ಸಸ್ಯ ದಕ್ಷಿಣ ಮತ್ತು ಮಧ್ಯ ಸಹ್ಯಾದ್ರಿಯಲ್ಲಿ ವ್ಯಾಪಿಸಿದೆ.

ಗ್ರಂಥ ಸೂಚಿ :

Blumea 38(1):131.1993;Singh,Monograph on Indian Diospyros L. (Persimmon, Ebony) Ebenaceae 107.2005

Top of the Page