ಡಯೋಸ್ಪೈರಾಸ್ ಹ್ಯುಮಿಲಿಸ್ Bourd. - ಎಬೆನೇಸಿ

ಕನ್ನಡದ ಪ್ರಾದೇಶಿಕ ಹೆಸರು : ಎಬೋನಿ

English   Kannada   Malayalam   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : 10 ಮೀ. ಎತ್ತರದವರೆಗೆ ಬೆಳೆಯುವ ಮರಗಳು.
ಕಾಂಡ ಮತ್ತು ತೊಗಟೆ : ತೊಗಟೆ ನಯವಾಗಿದ್ದು ಬೂದು ಮಿಶ್ರಿತ ಕಪ್ಪು ಬಣ್ಣದಲ್ಲಿದ್ದು,ಸಣ್ಣ ಚಕ್ಕೆ ರೂಪದಲ್ಲಿರುತ್ತದೆ;ಕಚ್ಚು ಮಾಡಿದ ಜಾಗ ಮಬ್ಬಾದ ಕೆಂಪು ಬಣ್ಣದಲ್ಲಿರುತ್ತದೆ.
ಕವಲುಗಳು ಮತ್ತು ಕಿರುಕೊಂಬೆಗಳು : ಕಿರುಕೊಂಬೆಗಳು ದುಂಡಾಗಿದ್ದು ಮೃದುತುಪ್ಪಳದಿಂದ ಕೂಡಿರುತ್ತವೆ.
ಎಲೆಗಳು : ಎಲೆಗಳು ಸರಳವಾಗಿದ್ದು ಪರ್ಯಾಯ ಹಾಗೂ ಸುತ್ತು ಜೋಡನಾ ವ್ಯವಸ್ಥೆ ಯಲ್ಲಿದ್ದು ಕಾಂಡದ ಎರಡೂ ಕಡೆಯ ಎದುರು ಬದರಿನ ಸಾಲಿನಲ್ಲಿರುತ್ತವೆ; ಎಲೆ ತೊಟ್ಟುಗಳು 0.2-0.4 ಸೆಂ.ಮೀ ಉದ್ದವಿದ್ದು ದುಂಡಾಗಿರುತ್ತವೆ ಹಾಗೂ ಮೃದುತುಪ್ಪಳದಿಂದ ಕೂಡಿರುತ್ತವೆ; ಪತ್ರಗಳು 4 – 11 X 1.5 – 4.5 ಸೆಂ.ಮೀ. ಗಾತ್ರ,ಸಾಧಾರಣವಾಗಿ ಅಂಡವೃತ್ತದಿಂದ ಅಂಡವೃತ್ತ-ಅಂಡದ ಆಕಾರ,ಸಂಕುಚಿತ ಮೊಂಡಾದ ಅಗ್ರವುಳ್ಳ ಕ್ರಮೇಣ ಚೂಪಾಗುವ ತುದಿ ; ಚೂಪಾದುದರಿಂದ ಹಿಡಿದು ದುಂಡಾದ ಬುಡ , ನಯವಾದ ಅಂಚು, ತೊಗಲನ್ನೋಲುವ ಮೇಲ್ಮೈ ಹೊಂದಿರುತ್ತವೆ;ಪತ್ರದ ಮೇಲ್ಭಾಗ ರೋಮರಹಿತವಾಗಿದ್ದು ಪತ್ರದ ತಳಭಾಗದ ಮಧ್ಯನಾಳ ದಟ್ಟವಾದ ಮೃದುತುಪ್ಪಳದಿಂದ ಕೂಡಿರುತ್ತದೆ;ಪತ್ರದ ಮೇಲ್ಭಾಗದಲ್ಲಿನ ಮಧ್ಯನಾಳ ಕಾಲುವೆಗೆರೆಯನ್ನು ಹೊಂದಿರುತ್ತದೆ;ಎರಡನೇ ದರ್ಜೆಯ ನಾಳಗಳು 6 - 8 ಜೋಡಿಗಳಿದ್ದು, ತೆಳುವಾಗಿರುತ್ತವೆ; ಮೂರನೇ ದರ್ಜೆಯ ನಾಳಗಳು ತೆಳುವಾಗಿದ್ದು ದುರ್ಬಲವಾಗಿ ಎಲೆ ದಿಂಡಿಗೆ ಅಡ್ಡವಾಗಿ ಕೂಡುವಂತವು.
ಪುಷ್ಪಮಂಜರಿ/ಹೂಗಳು : ಹೂಗಳು ಏಕ ಲಿಂಗಿಗಳು; ಗಂಡು ಹೂಗಳು ಅಕ್ಷಾಕಂಕುಳಿನಲ್ಲಿನ ಗುಚ್ಛಾಕಾರದ ಮಧ್ಯಾರಂಭಿ ಪುಷ್ಪಮಂಜರಿಯಲ್ಲಿರುತ್ತವೆ;ಹೆಣ್ಣು ಹೂಗಳು ಅಕ್ಷಾಕಂಕುಳಿನಲ್ಲಿ ಒಂಟಿಯಾಗಿರುತ್ತವೆ.
ಕಾಯಿ /ಬೀಜ : ಬೆರ್ರಿಗಳು1.5 ಸೆಂ.ಮೀ.ವರೆಗಿನ ವ್ಯಾಸ ಹೊಂದಿದ್ದು ಚತುರಸ್ರ ಅಥವಾ ಗೋಳಾಕಾರದಲ್ಲಿರುತ್ತವೆ ಹಾಗೂ ರೋಮರಹಿತವಾಗಿರುತ್ತವೆ ;ಕಾಯಿಗಳ ಪುಷ್ಪಪಾತ್ರೆ ವೃದ್ಧಿಸಿರುವುದಿಲ್ಲ;ಬೀಜಗಳು 2 ರಿಂದ 4

ಜೀವಪರಿಸ್ಥಿತಿ :

400 ರಿಂದ 1000 ಮೀ.ವರೆಗಿನ ಎತ್ತರದ ಪ್ರದೇಶಗಳಲ್ಲಿನ ತೇವಾಂಶವುಳ್ಳ ನಿತ್ಯಹರಿದ್ವರ್ಣ ಕಾಡುಗಳ ಒಳಛಾವಣಿಯಲ್ಲಿ ಈ ಸಸ್ಯ ಕಂಡುಬರುತ್ತದೆ.

ವ್ಯಾಪನೆ :

ಪಶ್ಚಿಮ ಘಟ್ಟಕ್ಕೆ ಸೀಮಿತವಾದ ಈ ಸಸ್ಯ ಅಗಸ್ತ್ಯ ಮಲೆ ಬೆಟ್ಟದಲ್ಲಿ ಬೆಳೆಯುತ್ತದೆ.

ಗ್ರಂಥ ಸೂಚಿ :

J. Bombay Nat. Hist. Soc. 12:352.t. 4 1899; Gamble,Fl.Madras 2:773.1997(rep.ed.)Sasidharan, Biodiversity documentation for Kerala-Flowering Plants,part 6.271.2004

Top of the Page