ಫೈಕಸ್ ವೈರೆನ್ಸ್ Ait. - ಮೊರೇಸಿ

ಪರ್ಯಾಯ ನಾಮ : ಫೈಕಸ್ ಇನ್ಫೆಕ್ಟೋರಿಯ Roxb.

Vernacular names : Tamil: ಮಲೈ-ಇಚ್ಚಿ;ಚೇರ್ಲ Malayalam: ಕರಿಬಸರಿ

English   Kannada   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : ಕೆಲವು ಬಿಳಲು ಬೇರುಗಳನ್ನೊಳಗೊಂಡ ಎಲೆಯುದುರು ಮಾದರಿಯ ಮರಗಳು.
ಕಾಂಡ ಮತ್ತು ತೊಗಟೆ : ತೊಗಟೆ ಕೊರಕಲುಗಳನ್ನೊಳಗೊಂಡಿರುತ್ತದೆ;ದಟ್ಟ ಕಂದು ಬಣ್ಣದಲ್ಲಿರುತ್ತದೆ ಮತ್ತು ಸೂಕ್ಷ್ಮ ವಾಯು ವಿನಿಮಯ ಬೆಂಡು ರಂಧ್ರಗಳ ಸಮೇತವಿರುತ್ತದೆ ;ಕಚ್ಚು ಮಾಡಿದ ಜಾಗ ನಸುಗೆಂಪಾಗಿರುತ್ತದೆ.
ಕವಲುಗಳು ಮತ್ತು ಕಿರುಕೊಂಬೆಗಳು : ಕಿರುಕೊಂಬೆಗಳು ಉಪ-ದುಂಡಾಗಿದ್ದು ರೋಮರಹಿತವಾಗಿರುತ್ತವೆ ಹಾಗೂ ಸೂಕ್ಷ್ಮ ವಾಯು ವಿನಿಮಯ ಬೆಂಡು ರಂಧ್ರಗಳ ಸಮೇತವಿರುತ್ತದೆ .
ಜಿನುಗು ದ್ರವ : ಜಿನುಗು ದ್ರವ ಬಿಳಿಯಾಗಿದ್ದು ವಿಫುಲವಾಗಿರುತ್ತದೆ.
ಎಲೆಗಳು : ಎಲೆಗಳು ಸರಳವಾಗಿದ್ದು ಪರ್ಯಾಯ ಮತ್ತು ಸುತ್ತು ಜೋಡನಾ ವ್ಯವಸ್ಥೆಯಲ್ಲಿರುತ್ತವೆ; ಕಾವಿನೆಲೆಗಳು ಅಂದಾಜು1 ಸೆಂ.ಮೀ.ವರೆಗಿನ ಉದ್ದ ಹೊಂದಿದ್ದು ವಲಯಾಕಾರದ ಗುರುತುಗಳನ್ನುಳಿಸಿ ಉದುರಿ ಹೋಗುತ್ತವೆ;ತೊಟ್ಟುಗಳು 3.7 - 6 ಸೆಂ.ಮೀ. ಉದ್ದ ಹೊಂದಿದ್ದು ಕಾಲುವೆಗೆರೆ ಸಮೇತವಾಗಿರುತ್ತವೆ ಮತ್ತು ರೋಮರಹಿತವಾಗಿರುತ್ತವೆ;ಪತ್ರಗಳು 5- 17.5 X 3 - 10 ಸೆಂ.ಮೀ.ವರೆಗಿನ ಗಾತ್ರವಿದ್ದು ಅಂಡವೃತ್ತ, ಚತುರಸ್ರ- ಅಂಡದ ಆಕಾರ ಹೊಂದಿದ್ದು, ಮೊಂಡಾಗ್ರವುಳ್ಳ ಕ್ರಮೇಣ ಚೂಪಾಗುವ ತುದಿ, ಛಿನ್ನಾಗ್ರ, ದುಂಡಾದ ಅಥವಾ ಅಗಲವಾದ ಹಾಗೂ ದುಂಡನೆಯ ತುದಿಯಲ್ಲಿ ತಗ್ಗುಳ್ಳ ಬುಡ, ನಯವಾದ ಅಂಚು, ತೊಗಲನ್ನೋಲುವ ಮೇಲ್ಮೈ, ಹೊಂದಿದ್ದು ರೋಮರಹಿತವಾಗಿರುತ್ತವೆ; 3 ಆಧಾರ ನಾಳಗಳು ಪತ್ರಗಳ ಬುಡದಲ್ಲಿರುತ್ತವೆ ;ಮಧ್ಯ ನಾಳ ಮೇಲ್ಭಾಗದಲ್ಲಿ ಮೇಲೆದ್ದಿರುತ್ತದೆ ; ಎರಡನೇ ದರ್ಜೆಯ ನಾಳಗಳು 5 - 15 ಜೋಡಿಗಳಿದ್ದು ಅಂಚಿನ ಬಳಿ ಕುಣಿಕೆಗೊಂಡಿರುತ್ತವೆ;ಮೂರನೇ ದರ್ಜೆಯ ನಾಳಗಳು ವಿಶಾಲ ಜಾಲಬಂಧ ನಾಳ ವಿನ್ಯಾಸದಲ್ಲಿರುತ್ತವೆ.
ಪುಷ್ಪಮಂಜರಿ / ಹೂಗಳು : ಪುಷ್ಪಮಂಜರಿಗಳು ಸೈಕೋನಿಯ ರೀತಿಯವುಗಳಾಗಿದ್ದು , ಗೋಳ ಅಥವಾ ಕೆಲವು ವೇಳೆ ತಲೆಗೆಳಗಾದ ಶಂಖುವಿನ ಆಕಾರದಲ್ಲಿರುತ್ತವೆ ಮತ್ತು ಅಕ್ಷಾಕಂಕುಳಿನಲ್ಲಿ ಜೋಡಿಯಾಗಿರುತ್ತವೆ ಹಾಗೂ1 ರಿಂದ 1.5 ಸೆಂ.ಮೀ. ಅಡ್ಡಗಲತೆ ಹೊಂದಿರುತ್ತವೆ;ಹೂಗಳು ಏಕ ಲಿಂಗಿಗಳು.
ಕಾಯಿ / ಬೀಜ : ಸೈಕೋನಿಯ (ಸಂಯುಕ್ತ ಫಲ) ಕಳೆತಾಗ ನಸುಗೆಂಪು ಬಣ್ಣ ಹೊಂದಿರುತ್ತವೆ;ಅಖೀನುಗಳು ನಯವಾಗಿರುತ್ತವೆ.

ಜೀವಪರಿಸ್ಥಿತಿ :

1200 ಮೀ.ವರೆಗಿನ ಎತ್ತರದ ಪ್ರದೇಶಗಳಲ್ಲಿನ ಭಗ್ನಗೊಂಡ ನಿತ್ಯ ಹರಿದ್ವರ್ಣದಿಂದ ಅರೆನಿತ್ಯ ಹರಿದ್ವರ್ಣವರೆಗಿನ ಕಾಡುಗಳಲ್ಲಿ ಈ ಪ್ರಭೇದ ಕಂಡು ಬರುತ್ತದೆ.

ವ್ಯಾಪನೆ :

ಇಂಡೋಮಲೇಸಿಯದಿಂದ ಸೋಲೊಮನ್ ದ್ವೀಪಗಳು;ಪಶ್ಚಿಮ ಘಟ್ಟದ ಎಲ್ಲಾ ಪ್ರದೇಶಗಳಲ್ಲಿ ಈ ಪ್ರಭೇದ ಕಂಡು ಬರುತ್ತದೆ.

ಗ್ರಂಥ ಸೂಚಿ :

Hort. Kew(ed 1) 3: 451.1789;Gamble, Fl. Madras 3:1362.1998(rep.ed.); Sasidharan, Biodiversity documentation for Kerala- Flowering Plants, part 6:441.2004.

Top of the Page