ಇಕ್ಸೋರ ನೈಗ್ರಿಕ್ಯನ್ಸ್ R. Br. Wt. & Arn. - ರೂಬಿಯೇಸಿ

:

Vernacular names : Tamil: ಚೆರುಕುರುವುMalayalam: ಅಡಯಾಲ,ಏಲೆಗಾರ,ಕಿಸುಗಾರೆ

English   Kannada   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : 5 ಮೀ ಎತ್ತರದವರೆಗಿನ ದೊಡ್ಡ ಗಾತ್ರದ ಪೊದೆಗಳು ಅಥವಾ ಸಣ್ಣ ಗಾತ್ರದ ಮರಗಳು.
ಕಾಂಡ ಮತ್ತು ತೊಗಟೆ : ತೊಗಟೆ ನಯವಾಗಿರುತ್ತದೆ.
ಕವಲುಗಳು ಮತ್ತು ಕಿರುಕೊಂಬೆಗಳು : ಎಳೆಯ ಕಿರುಕೊಂಬೆಗಳು ಉಪ-ದುಂಡಾಗಿರುವುದರಿಂದ ಸಂಕುಚಿತವಾದ ಮಾದರಿಯವರೆಗಿನ ಆಕಾರ ಹೊಂದಿರುತ್ತವೆ ಹಾಗೂ ರೋಮರಹಿತವಾಗಿರುತ್ತವೆ.
ಎಲೆಗಳು : ಎಲೆಗಳು ಸರಳವಾಗಿದ್ದು ಕತ್ತರಿಯಾಕಾರದ ಅಭಿಮುಖ ಜೋಡನಾ ವ್ಯವಸ್ಥೆಯಲ್ಲಿರುತ್ತವೆ; ಕಾವಿನೆಲೆಗಳು ವಿಶಾಲವಾದ ಬುಡವುಳ್ಳ ರೇಖಾತ್ಮಕ-ದಬ್ಬಳದ ಆಕಾರದಲ್ಲಿದ್ದು 0.9 ಸೆಂ.ಮೀ. ಉದ್ದ ಹೊಂದಿರುತ್ತವೆ;ತೊಟ್ಟು 0.4 - 1.2 ಸೆಂ.ಮೀ.ವರೆಗಿನ ಉದ್ದವಿದ್ದು, ರೋಮರಹಿತವಾಗಿರುತ್ತದೆ, ಅಡ್ಡ ಸೀಳಿದಾಗ ಸಪಾಟ ಪೀನ ಮಧ್ಯದ ಆಕಾರ ಹೊಂದಿರುತ್ತದೆ,ಕೆಲವುವೇಳೆತೊಟ್ಟಿನ ಅಂಚು ಮಡಿಚುವ ಕಾರಣದಿಂದ ಕಾಲುವೆಗೆರೆಯಯನ್ನು ಹೊಂದಿರುತ್ತದೆ;ಪತ್ರಗಳು 6-16 X 2 –6 ಸೆಂ.ಮೀ. ಗಾತ್ರ ಹೊಂದಿದ್ದುಆಕಾರದಲ್ಲಿ ವೈವಿಧ್ಯತೆ ಹೊಂದಿರುತ್ತವೆ,ಸಂಕುಚಿತ ಅಂಡವೃತ್ತದಿಂದ ಅಂಡವೃತ್ತ, ಅಥವಾ ಬುಗುರಿ-ಭರ್ಜಿಯಿಂದ ಸಂಕುಚಿತ ಬುಗುರಿಯವರೆಗಿನ ಆಕಾರ ಹೊಂದಿದ್ದು, ಕ್ರಮೇಣ ಚೂಪಾಗುವ ತುದಿ, ಬೆಣೆಯಾಕಾರದಿಂದ ಒಳಬಾಗಿದ ಮಾದರಿವರೆಗಿನ ಬುಡ, ನಯವಾದ ಅಂಚು, ಕಾಗದವನ್ನೋಲುವ ಮೇಲ್ಮೈ ಹೊಂದಿದ್ದು ರೋಮರಹಿತವಾಗಿರುತ್ತವೆ ಮತ್ತು ಒಣಗಿದಾಗ ಕಪ್ಪಾಗಿರುತ್ತವೆ; ಮಧ್ಯನಾಳ ಪತ್ರದ ಮೇಲ್ಭಾಗದಲ್ಲಿ ಚಪ್ಪಟೆಯಾಗಿರುತ್ತದೆ;ಎರಡನೇ ದರ್ಜೆಯ ನಾಳಗಳು ಅಂದಾಜು6 ರಿಂದ 12 ಜೋಡಿಗಳಿರುತ್ತವೆ; ಮೂರನೇ ದರ್ಜೆಯ ನಾಳಗಳು ತೆಳುವಾಗಿದ್ದು ವಿಶಾಲ ಜಾಲಬಂಧ ನಾಳ ವಿನ್ಯಾಸದಿಂದ ಜಾಲಬಂಧ ನಾಳ ವಿನ್ಯಾಸದಲ್ಲಿದ್ದು ಎಲೆಯ ದಿಂಡಿಗೆ ಅಡ್ಡವಾಗಿ ಕೂಡುವವರೆಗಿನ ಮಾದರಿಯಲ್ಲಿರುತ್ತವೆ.
ಪುಷ್ಪಮಂಜರಿ / ಹೂಗಳು : ಪುಷ್ಪಮಂಜರಿಗಳು ತುದಿಯಲ್ಲಿನ ಪುನರಾವೃತ್ತಿಯಾಗಿ ಕವಲೊಡೆಯುವ ಮಧ್ಯಾರಂಭಿ ಮಾದರಿಯವು; ಹೂಗಳು ಬಿಳಿ ಬಣ್ಣದವು.
ಕಾಯಿ / ಬೀಜ : ಬೆರ್ರಿಗಳು, 0.7 ಸೆಂ.ಮೀ. ಅಡ್ಡಗಲತೆ ಹೊಂದಿದ್ದು ಬಹುಮಟ್ಟಿಗೆ ಗೋಳದ ಆಕಾರ ಹೊಂದಿರುತ್ತವೆ; ಬೀಜಗಳ ಸಂಖ್ಯೆ 2.

ಜೀವಪರಿಸ್ಥಿತಿ :

1900 ಮೀ. ವರೆಗಿನ ಎತ್ತರದ ಪ್ರದೇಶಗಳಲ್ಲಿನ ನಿತ್ಯ ಹರಿದ್ವರ್ಣದಿಂದ ಒಣ ನಿತ್ಯ ಹರಿದ್ವರ್ಣದವರೆಗಿನ ಕಾಡುಗಳ ಒಳಗೆ ಮರಗಳು ಬೆಳೆಯುತ್ತವೆ.

ವ್ಯಾಪನೆ :

ಇಂಡೋಮಲೇಸಿಯ;ಪಶ್ಚಿಮ ಘಟ್ಟದ ಎಲ್ಲಾ ಪ್ರದೇಶಗಳಲ್ಲಿ ಈ ಪ್ರಭೇದ ಕಂಡುಬರುತ್ತದೆ.

ಗ್ರಂಥ ಸೂಚಿ :

Prodr. 4. 428. 1834; Gamble, Fl. Madras 2: 631. 1993 (re. ed); Sasidharan, Biodiversity documentation for Kerala- Flowering Plants, part 6: 219. 2004; Almeida, Fl. Maharashtra 3:24. 2001; Cooke, Fl. Bombay 1: 609.1903.

Top of the Page