ಲ್ಯಾಸಿಯಾಂತಸ್ ರೊಸ್ಟ್ರೇಟಸ್ Wt. - ರೂಬಿಯೇಸಿ

:

English   Kannada   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : ದೊಡ್ಡ ಗಾತ್ರದ ಪೊದೆಗಳು ಅಥವಾ 5 ಮೀ. ಎತ್ತರದ ಸಣ್ಣ ಗಾತ್ರದ ಮರಗಳು.
ಕಾಂಡ ಮತ್ತು ತೊಗಟೆ : ತೊಗಟೆ ಕಂದು ಬಣ್ಣದಲ್ಲಿದ್ದು ನಯವಾಗಿರುತ್ತದೆ.
ಕವಲುಗಳು ಮತ್ತು ಕಿರುಕೊಂಬೆಗಳು : ಕಿರುಕೊಂಬೆಗಳು ಕಾಂಡದ ಲಂಬ ರೇಖೆಗೆ ಸಮಕೋನದಲ್ಲಿರುತ್ತವೆ;ಕಿರುಕೊಂಬೆಗಳು ಉಪ-ದುಂಡಾಗಿರುವುದರಿಂದ ಸಂಕುಚಿತವರೆಗಿನ ಆಕಾರ ಹೊಂದಿರುತ್ತವೆ ಮತ್ತುಕಂದು ಬಣ್ಣದ ದಟ್ಟ ಮೃದುತುಪ್ಪಳದಿಂದ ಕೂಡಿರುತ್ತವೆ.
ಎಲೆಗಳು : ಎಲೆಗಳು ಸರಳವಾಗಿದ್ದು ಕತ್ತರಿಯಾಕಾರದ ಅಭಿಮುಖ ಜೋಡನಾ ವ್ಯವಸ್ಥೆಯಲ್ಲಿರುತ್ತವೆ; ಕಾವಿನೆಲೆಗಳು ರೇಖಾತ್ಮಕ ದಬ್ಬಳದಾಕಾರದಲ್ಲಿದ್ದು ತೊಟ್ಟುಗಳ ನಡುವೆ ಇರುತ್ತವೆ ಹಾಗೂ ಉದುರಿದಾಗ ಗುರುತುಗಳನ್ನು ಉಳಿಸುತ್ತವೆ;ತೊಟ್ಟು 0.2 ರಿಂದ 0.5 ಸೆಂ.ಮೀ.ವರೆಗಿನ ಉದ್ದವಿದ್ದು, ಅಡ್ಡ ಸೀಳಿದಾಗ ಸಪಾಟ ಪೀನ ಮಧ್ಯದ ಆಕಾರ ಹೊಂದಿದ್ದು ಒರಟು ರೋಮಗಳಿಂದ ಕೂಡಿರುತ್ತವೆ;ಪತ್ರಗಳು 7.5-12.5 X 2.7 – 3.2 ಸೆಂ.ಮೀ. ಗಾತ್ರ ಹೊಂದಿದ್ದು ಅಂಡವೃತ್ತ-ಅಂಡದಿಂದ ಅಂಡವೃತ್ತ -ಚತುರಸ್ರದವರೆಗಿನ ಆಕಾರ ಹೊಂದಿದ್ದು, ಬಾಲರೂಪಿ-ಕ್ರಮೇಣ ಚೂಪಾಗುವ ಮಾದರಿಯ ತುದಿ, ಚೂಪಾದ ಅಥವಾ ಚೂಪಲ್ಲದ ಬುಡ, ನಯವಾದ ಅಂಚು ಹೊಂದಿದ್ದು ದಟ್ಟ ಮೃದುತುಪ್ಪಳದಿಂದ ಕೂಡಿರುತ್ತವೆ;ಮಧ್ಯನಾಳ ಪತ್ರದ ಮೇಲ್ಭಾಗದಲ್ಲಿ ತುಸುವಾಗಿ ಕಾಲುವೆಗೆರೆ ಹೊಂದಿರುತ್ತದೆ;ಎರಡನೇ ದರ್ಜೆಯ ನಾಳಗಳು 5 ರಿಂದ 7 ಜೋಡಿಗಳಿರುತ್ತವೆ; ಮೂರನೇ ದರ್ಜೆಯ ನಾಳಗಳು ಎಲೆ ದಿಂಡಿಗೆ ಸಮಕೋನದಲ್ಲಿದ್ದು ಕಡಿಮೆ ಅಂತರ ಹೊಂದಿದ್ದು ಎಲೆಯ ದಿಂಡಿಗೆ ಅಡ್ಡವಾಗಿ ಕೂಡುತ್ತವೆ.
ಪುಷ್ಪಮಂಜರಿ / ಹೂಗಳು : ಪುಷ್ಪಮಂಜರಿಗಳು ಅಕ್ಷಾಕಂಕುಳಿನಲ್ಲಿನ ಗುಚ್ಛಗಳಲ್ಲಿರುತ್ತವೆ;ಹೂಗಳು ತೊಟ್ಟು ರಹಿತವಾಗಿದ್ದು ಬಿಳಿ ಬಣ್ಣದಲ್ಲಿರುತ್ತವೆ.
ಕಾಯಿ / ಬೀಜ : ಡ್ರೂಪ್ಗಳು ಗೋಳಾಕಾರದಲ್ಲಿದ್ದು ಅಗ್ರದಲ್ಲಿ ಶಾಶ್ವತವಾದ ಪುಷ್ಪಪಾತ್ರೆಯ ಎಸಳುಗಳನ್ನು ಹೊಂದಿರುತ್ತವೆ;ಬೀಜಗಳ ಸಂಖ್ಯೆ 4.

ಜೀವಪರಿಸ್ಥಿತಿ :

600 ಮತ್ತು1000 ಮೀ. ನಡುವಿನ ಎತ್ತರದ ಪ್ರದೇಶಗಳ ನಿತ್ಯ ಹರಿದ್ವರ್ಣ ಕಾಡುಗಳ ಒಳಛಾವಣಿಯಲ್ಲಿ ಈ ಪ್ರಭೇದ ಬೆಳೆಯುತ್ತದೆ.

ವ್ಯಾಪನೆ :

ನೈರುತ್ಯ ಪಶ್ಚಿಮ ಘಟ್ಟಕ್ಕೆ ಸೀಮಿತವಾದ ಈ ಪ್ರಭೇದ ದಕ್ಷಿಣ ಸಹ್ಯಾದ್ರಿಯ ಏಲಮಲೈನಿಂದ ಅಣ್ಣಾಮಲೈವರೆಗಿನ ಪ್ರದೇಶಗಳಲ್ಲಿ ಕಂಡುಬರುತ್ತದೆ.

ಗ್ರಂಥ ಸೂಚಿ :

Cal. J. Nat. Hist. 6: 510. 1846; Gamble, Fl. Madras 2: 647. 1993 (re. ed); Sasidharan, Biodiversity documentation for Kerala- Flowering Plants, part 6: 222. 2004.

Top of the Page