ನಿಯೋಲಮಾರ್ಕಿಯ ಪರ್ಪ್ಯೂರಿಯ (Roxb.) Merr. - ರೂಬಿಯೇಸಿ

ಪರ್ಯಾಯ ನಾಮ : ನಾಕ್ಳಿಯ ಪರ್ಪ್ಯೂರಿಯ Roxb.

Vernacular names : Tamil: ಮಂಜನೀರ್ ಕಡಂಬು Malayalam: ಅಹ್ನನ್

English   Kannada   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : 20 ಮೀ. ಎತ್ತರದವರೆಗಿನ ಮರಗಳು.
ಕಾಂಡ ಮತ್ತು ತೊಗಟೆ : ತೊಗಟೆ ಬೂದು ಬಣ್ಣದಲ್ಲಿದ್ದು ಅನಿಯತವಾದ ಚಕ್ಕೆ ರೂಪದಲ್ಲಿರುತ್ತದೆ;ಕಚ್ಚು ಮಾಡಿದ ಜಾಗ ಹಳದಿ.
ಕವಲುಗಳು ಮತ್ತು ಕಿರುಕೊಂಬೆಗಳು : ಕಿರುಕೊಂಬೆಗಳು ಕೊಂಚ ಮಟ್ಟಿಗೆ ಕೋನಯುಕ್ತವಾಗಿರುತ್ತವೆ,ಬಲಿತಾಗ ದುಂಡಾಗಿರುತ್ತವೆ, ರೋಮರಹಿತವಾಗಿರುತ್ತವೆ.
ಎಲೆಗಳು : ಎಲೆಗಳು ಸರಳವಾಗಿದ್ದು ಕತ್ತರಿಯಾಕಾರದ ಅಭಿಮುಖ ಜೋಡನಾ ವ್ಯವಸ್ಥೆಯಲ್ಲಿರುತ್ತವೆ; ಕಾವಿನೆಲೆಗಳು ದೊಡ್ಡದಲ್ಲಿದ್ದು,ಎಲೆಗಳ ರೀತಿಯಿದ್ದು,ಬುಗುರಿಯ ಆಕಾರ ಹೊಂದಿದ್ದು, ತೊಟ್ಟುಗಳ ನಡುವೆ ಇರುತ್ತವೆ ಮತ್ತು ಉದುರಿದಾಗ ಗುರುತನ್ನು ಉಳಿಸುತ್ತವೆ;ತೊಟ್ಟು 1 ರಿಂದ 2 ಸೆಂ.ಮೀ.ವರೆಗಿನ ಉದ್ದವಿದ್ದು, ಅಡ್ಡ ಸೀಳಿದಾಗ ಸಪಾಟ ಪೀನ ಮಧ್ಯದ ಆಕಾರ ಹೊಂದಿದ್ದು, ರೋಮರಹಿತವಾಗಿರುತ್ತವೆ;ಪತ್ರಗಳು 8.5 -16 X 4-12 ಸೆಂ.ಮೀ. ಗಾತ್ರ ಹೊಂದಿದ್ದು ಅಂಡವೃತ್ತ, ಅಂಡವೃತ್ತ-ಬುಗುರಿಯ ಆಕಾರ ಹೊಂದಿದ್ದು, ಕ್ರಮೇಣ ಚೂಪಾಗುವ ಮಾದರಿಯ ತುದಿ, ಚೂಪಾದದುದರಿಂದ ಚೂಪಲ್ಲದ ಮಾದರಿವರೆಗಿನ ಬುಡ, ನಯವಾದ ಅಂಚು,ಕಾಗದವನ್ನೋಲುವ ಮೇಲ್ಮೈ ಹೊಂದಿದ್ದು ತಳಭಾಗದಲ್ಲಿ ರೋಮರಹಿತವಾಗಿರುತ್ತವೆ;ಮಧ್ಯನಾಳ ಪತ್ರದ ಮೇಲ್ಭಾಗದಲ್ಲಿ ಚಪ್ಪಟೆಯಾಗಿರುತ್ತದೆ; ಎರಡನೇ ದರ್ಜೆಯ ನಾಳಗಳು 6 ರಿಂದ 8 ಜೋಡಿಗಳಿರುತ್ತವೆ;ಮೂರನೇ ದರ್ಜೆಯ ನಾಳಗಳು ಹೆಚ್ಚಿನ ಅಂತರ ಹೊಂದಿದ್ದು ಓರೆಯಾಗಿ ಎಲೆಯ ದಿಂಡಿಗೆ ಅಡ್ಡವಾಗಿ ಕೂಡುತ್ತವೆ.
ಪುಷ್ಪಮಂಜರಿ / ಹೂಗಳು : ಪುಷ್ಪಮಂಜರಿಗಳು ಅಕ್ಷಾಕಂಕುಳಿನಲ್ಲಿನ ಅಥವಾ ತುದಿಯಲ್ಲಿನ ಗೋಳಾಕಾರ ಮಂಜರಿ ಮಾದರಿಯವು;ಹೂಗಳು ತೊಟ್ಟುರಹಿತವಾಗಿದ್ದು ಕೆನ್ನೀಲಿ ಬಣ್ಣದಲ್ಲಿರುತ್ತವೆ.
ಕಾಯಿ / ಬೀಜ : ಸಂಪುಟ ಫಲಗಳು ದುಂಡಗಿನ ಗೋಳಾಕಾರದಲ್ಲಿ ಜೋಡನೆಯಾಗಿರುತ್ತವೆ,ಪ್ರತಿಯೊಂದು ಸಂಪುಟ ಫಲದಲ್ಲಿ 2 ಮರಿ ಸೋತಫಲಗಳಿರುತ್ತವೆ;ಬೀಜಗಳ ಸಂಖ್ಯೆ ಹಲವಾರು,ಚಪ್ಪಟೆಯಾಗಿದ್ದು ರೆಕ್ಕೆಯುಕ್ತವಾಗಿರುತ್ತವೆ.

ಜೀವಪರಿಸ್ಥಿತಿ :

700 ಮೀ. ಎತ್ತರದ ಪ್ರದೇಶಗಳ ನಿತ್ಯ ಹರಿದ್ವರ್ಣ ಕಾಡುಗಳ ಹೊಳೆಗಳ ಅಂಚಿನಲ್ಲಿ ಈ ಪ್ರಭೇದ ಬೆಳೆಯುತ್ತದೆ.

ವ್ಯಾಪನೆ :

ಇಂಡೋಮಲೇಸಿಯ ,ಏಷ್ಯಾಫೆಸಿಫಿಕ್ ಮತ್ತು ಆಸ್ಟ್ರೇಲಿಯ ; ಪಶ್ಚಿಮ ಘಟ್ಟದಲ್ಲಿನ ದಕ್ಷಿಣ, ಮಧ್ಯ ಮತ್ತು ಸಹ್ಯಾದ್ರಿ ಪ್ರದೇಶಗಳು.

ಗ್ರಂಥ ಸೂಚಿ :

Interpr. Rumph. Herb. Amboin. 483. 1917; Gamble, Fl. Madras 2: 584. 1993 (re. ed); Sasidharan, Biodiversity documentation for Kerala- Flowering Plants, part 6: 225. 2004; Cook, Fl. Bombay 1: 580.1903; Almeida, Fl. Maharashtra 3:41. 2001.

Top of the Page