ಫೊಟಿನಿಯ ಇಂಟೆಗ್ರಿಫೋಲಿಯ Lindl. var. ಸಬ್ಲ್ಯಾನ್ಸಿಯೋಲೇ - ರೋಸೇಸಿ

ಪರ್ಯಾಯ ನಾಮ : ಫೊಟಿನಿಯ ನೊಟೋನಿಯಾನ Wt. & Arn.

Vernacular names : Tamil: ಚೊಲುವನ್ಮರಮ್;ಕಲಪ್ಪಮರಮ್Malayalam: ಕೊಡ-ಬಿಕ್ಕಿ;ಕೊಡಿಬಿಕ್ಕಿ

English   Kannada   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : 10 ಮೀ. ಎತ್ತರದವರೆಗಿನ ಸಣ್ಣ ಮರಗಳು.
ಕಾಂಡ ಮತ್ತು ತೊಗಟೆ : ತೊಗಟೆ ಕೆಂಪು ಮಿಶ್ರಿತ ಕಂದು ಬಣ್ಣದಲ್ಲಿದ್ದು ವಾಯುವಿನಿಮಯ ಬೆಂಡು ರಂಧ್ರಗಳ ಸಮೇತವಿರುತ್ತವೆ; ಕಚ್ಚು ಮಾಡಿದ ಜಾಗ ನಸುಗೆಂಪು.
ಕವಲುಗಳು ಮತ್ತು ಕಿರುಕೊಂಬೆಗಳು : ಕಿರುಕೊಂಬೆಗಳು ದುಂಡಾಗಿರುತ್ತವೆ, ವಾಯುವಿನಿಮಯ ಬೆಂಡು ರಂಧ್ರಗಳ ಸಮೇತವಿದ್ದು ರೋಮರಹಿತವಾಗಿರುತ್ತವೆ.
ಎಲೆಗಳು : ಎಲೆಗಳು ಸರಳವಾಗಿದ್ದು ಪರ್ಯಾಯ ಮತ್ತು ಸುತ್ತು ಜೋಡನಾ ವ್ಯವಸ್ಥೆಯಲ್ಲಿದ್ದು ಕುಡಿಕೊಂಬೆಗಳ ತುದಿಯಲ್ಲಿ ಗುಂಪಾಗಿರುತ್ತವೆ; ಕಾವಿನೆಲೆಗಳು ದಬ್ಬಳದ ಆಕಾರ ಹೊಂದಿದ್ದು ಪಾರ್ಶ್ವದಲ್ಲಿದ್ದು ಉದುರಿದ ನಂತರ ಗುರುತುಗಳನ್ನು ಉಳಿಸುತ್ತವೆ;ತೊಟ್ಟು 1.5 ರಿಂದ 3.5 ಸೆಂ.ಮೀ.ವರೆಗಿನ ಉದ್ದವಿದ್ದು,ಮೇಲ್ಭಾಗದಲ್ಲಿ ಕಾಲುವೆಗೆರೆಯನ್ನು ಹೊಂದಿರುತ್ತದೆ ಮತ್ತು ರೋಮರಹಿತವಾಗಿರುತ್ತದೆ; ಪತ್ರಗಳು 7 -15.5 X 3.5–7.5 ಸೆಂ.ಮೀ. ಗಾತ್ರ, ಅಂಡವೃತ್ತದಿಂದ ಬುಗುರಿಯವರೆಗಿನ ಆಕಾರ ಹೊಂದಿದ್ದು,ಕ್ರಮೇಣ ಚೂಪಾಗುವ ಮಾದರಿಯ ತುದಿ ಹೊಂದಿದ್ದು ಹಲವು ಸಂದರ್ಭಗಳಲ್ಲಿ ಅಗ್ರ ತಿರುಚಿಕೊಂಡಿರುತ್ತದೆ,ಪತ್ರಗಳು ಚೂಪಾದುದರಿಂದ ದುಂಡಾದ ಬುಡ, ನಯವಾದ ಅಂಚು, ತೊಗಲನ್ನೋಲುವ ಮೇಲ್ಮೈ ಹೊಂದಿದ್ದು ರೋಮರಹಿತವಾಗಿರುತ್ತವೆ; ಮಧ್ಯನಾಳ ಪತ್ರದ ಮೇಲ್ಭಾಗದಲ್ಲಿ ಕಾಲುವೆಗೆರೆ ಸಮೇತವಿರುತ್ತದೆ;ಎರಡನೇ ದರ್ಜೆಯ ನಾಳಗಳು 7 ರಿಂದ 11 ಜೋಡಿಗಳಿರುತ್ತವೆ;ಮೂರನೇ ದರ್ಜೆಯ ನಾಳಗಳು ವಿಶಾಲ ಜಾಲಬಂಧ ನಾಳ ವಿನ್ಯಾಸದ ಮಾದರಿಯವು..
ಪುಷ್ಪಮಂಜರಿ / ಹೂಗಳು : ಪುಷ್ಪಮಂಜರಿಗಳು ತುದಿಯಲ್ಲಿನ ನೀಳಛತ್ರ ಮಾದರಿಯಲ್ಲಿರುತ್ತವೆ;ಹೂಗಳು ಉಪತೊಟ್ಟುಗಳನ್ನು ಹೊಂದಿದ್ದು ಬಿಳಿ ಬಣ್ಣದಲ್ಲಿರುತ್ತವೆ.
ಕಾಯಿ / ಬೀಜ : ಡ್ರೂಪ್ಗಳು ಗೋಳಾಕಾರದಲ್ಲಿದ್ದು ಕೆಂಪು ಛಾಯೆಯುಳ್ಳ ಕೆನ್ನೀಲಿ ಬಣ್ಣ ಹೊಂದಿರುತ್ತವೆ;ಬೀಜಗಳು ಎರಡು ಇದ್ದು ಸಂಕುಚಿತವಾಗಿರುತ್ತವೆ.

ಜೀವಪರಿಸ್ಥಿತಿ :

900 ಮತ್ತು 2100 ಮೀ. ನಡುವಿನ ಮಧ್ಯಮ ಮತ್ತು ಅತಿ ಎತ್ತರದ ಪ್ರದೇಶಗಳಲ್ಲಿನ ನಿತ್ಯ ಹರಿದ್ವರ್ಣ ಕಾಡುಗಳ ಅಂಚಿನಲ್ಲಿ ಈ ಮರಗಳು ಬೆಳೆಯುತ್ತವೆ.

ವ್ಯಾಪನೆ :

ಭಾರತ ಮತ್ತು ಶ್ರೀಲಂಕಾ;ಪಶ್ಚಿಮ ಘಟ್ಟದಲ್ಲಿನ ದಕ್ಷಿಣ ಸಹ್ಯಾದ್ರಿ ಮತ್ತು ನೀಲಗಿರಿ.

ಗ್ರಂಥ ಸೂಚಿ :

Fl. Ind. Bat. 1.387. 1857; Trans. Linn. Soc. London 13. 103. 1821; Gamble, Fl. Madras 1: 445. 1997 (re. ed); Sasidharan, Biodiversity documentation for Kerala- Flowering Plants, part 6: 165. 2004.

Top of the Page