ಸಿಂಪ್ಲೊಕಾಸ್ ಮ್ಯಾಕ್ರೋಕಾರ್ಪ Wt. ex Clarke ssp. ಮ್ಯಾಕ್ರೋಕಾರ್ಪ - ಸಿಂಪ್ಲೊಕೇಸಿ

:

Vernacular names : Tamil: ಮಲಂಪರಲ,ಮಲಪರಲ

English   Kannada   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಸ್ಥಿತಿ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : 8 ಮೀ. ಎತ್ತರದವರೆಗಿನ ಮರಗಳು.
ಕಾಂಡ ಮತ್ತು ತೊಗಟೆ : ತೊಗಟೆ ಕಂದು ಬಣ್ಣದ ಛಾಯೆಯಲ್ಲಿದ್ದು,ನಯವಾಗಿರುತ್ತದೆ,ವಾಯುವಿನಿಮಯ ಬೆಂಡು ರಂಧ್ರದ ಸಮೇತವಿರುತ್ತವೆ;ಕಚ್ಚು ಮಾಡಿದ ಜಾಗ ಗುಲಾಬಿ ಬಣ್ಣದಲ್ಲಿರುತ್ತದೆ.
ಕವಲುಗಳು ಮತ್ತು ಕಿರುಕೊಂಬೆಗಳು : ಎಳೆಯ ಕಿರುಕೊಂಬೆಗಳು ದುಂಡಾಗಿರುತ್ತವೆ ಮತ್ತು ತುಕ್ಕು ಬಣ್ಣದ ಮೃದು ತುಪ್ಪಳದಿಂದ ಕೂಡಿರುತ್ತದೆ.
ಎಲೆಗಳು : ಎಲೆಗಳು ಸರಳವಾಗಿದ್ದು ಪರ್ಯಾಯ ಮತ್ತು ಸುತ್ತು ಜೋಡನಾ ವ್ಯವಸ್ಥೆಯಲ್ಲಿರುತ್ತವೆ; ತೊಟ್ಟುಗಳು 0.5 – 1.3 ಸೆಂ.ಮೀ. ಉದ್ದವಿದ್ದು,ದೃಢವಾಗಿದ್ದು,ಕಾಲುವೆಗೆರೆ ಸಮೇತವಿರುತ್ತವೆ ಮತ್ತು ಎಳೆಯದಾಗಿದ್ದಾಗ ತುಕ್ಕು ಬಣ್ಣದ ಮೃದುತುಪ್ಪಳದಿಂದ ಕೂಡಿದ್ದು ನಂತರ ರೋಮರಹಿತವಾಗಿರುತ್ತವೆ; ಪತ್ರಗಳು 7 – 16 X 2 – 5.5 ಸೆಂ.ಮೀ. ಗಾತ್ರ,ಸಂಕುಚಿತ ಅಂಡವೃತ್ತದಿಂದ ಬುಗುರಿ ಭರ್ಜಿಯವರೆಗಿನ ಆಕಾರ ಹೊಂದಿದ್ದು, ಕ್ರಮೇಣ ಚೂಪಾಗುವ ಮಾದರಿಯಿಂದ ಬಾಲರೂಪಿ-ಕ್ರಮೇಣ ಚೂಪಾಗುವ ಮಾದರಿವರೆಗಿನ ತುದಿ, ಮತ್ತು ಚೂಪಾದುದರಿಂದ ಬೆಣೆಯಾಕಾರದವರೆಗಿನ ಮಾದರಿಯ ಬುಡ,ಗರಗಸ ದಂತಿತವಾದ ಅಂಚು,ತೊಗಲನ್ನೋಲುವ ಮೇಲ್ಮೈ ಹೊಂದಿದ್ದು ರೋಮರಹಿತ -ವಾಗಿರುತ್ತವೆ; ಮಧ್ಯನಾಳ ಪತ್ರದ ಮೇಲ್ಭಾಗದಲ್ಲಿ ಕಾಲುವೆಗೆರೆ ಸಮೇತವಿರುತ್ತದೆ; ಎರಡನೇ ದರ್ಜೆಯ ನಾಳಗಳು 9 - 12 ಜೋಡಿಗಳಿರುತ್ತವೆ;ಮೂರನೇ ದರ್ಜೆಯ ನಾಳಗಳು ಜಾಲಬಂಧ ನಾಳ ವಿನ್ಯಾಸದಲ್ಲಿದ್ದು ಎಲೆ ದಿಂಡಿಗೆ ಅಡ್ಡವಾಗಿ ಕೂಡುತ್ತವೆ.
ಪುಷ್ಪಮಂಜರಿ / ಹೂಗಳು : ಪುಷ್ಪಮಂಜರಿ ಸಂಕುಚಿತ ಕದಿರು ಮಂಜರಿ ಮಾದರಿಯವು;ಹೂಗಳು ತೊಟ್ಟುರಹಿತ.
ಕಾಯಿ / ಬೀಜ : ಡ್ರೂಪ್ಗಳು ಅಂಡವೃತ್ತದ ಆಕಾರದಲ್ಲಿದ್ದು,ಅಂದಾಜು 3 X 1.5 ಸೆಂ.ಮೀ. ಗಾತ್ರದಲ್ಲಿದ್ದು, ಬಿಳಿ ಬಣ್ಣ ಹೊಂದಿರುತ್ತವೆ;ಬೀಜಗಳು ಆಳವಿಲ್ಲದ ಉತ್ತಗೆರೆಗಳನ್ನು ಹೊಂದಿರುತ್ತವೆ.

ಜೀವಪರಿಸ್ಥಿತಿ :

700 ಮತ್ತು 1100 ಮೀ.ನಡುವಿನವರೆಗಿನ ಎತ್ತರದ ಪ್ರದೇಶಗಳ ತೇವಾಂಶದಿಂದ ಕೂಡಿದ ನಿತ್ಯ ಹರಿದ್ವರ್ಣ ಕಾಡುಗಳ ಒಳಛಾವಣಿಯಲ್ಲಿ ಈ ಪ್ರಭೇದ ಬೆಳೆಯುತ್ತದೆ.

ವ್ಯಾಪನೆ :

ನೈರುತ್ಯ ಪಶ್ಚಿಮ ಘಟ್ಟಕ್ಕೆ ಸೀಮಿತವಾದ ಈ ಪ್ರಭೇದ ಅಗಸ್ತ್ಯಮಲೈ ಪ್ರದೇಶಗಳಲ್ಲಿ ವ್ಯಾಪಿಸಿದೆ.

ಸ್ಥಿತಿ :

ದುರ್ಬಲ ಸ್ಥಿತಿ (IUCN,2000).

ಗ್ರಂಥ ಸೂಚಿ :

Beddome, For. Man. Bot. 150. 1872 & Ic. t. 116. 1868-1874; Gamble, Fl. Madras 2: 784. 1993 (re.ed.); Sasidharan, Biodiversity documentation for Kerala- Flowering Plants, part 6: 273. 2004; Nootboom, Rev. Symplocac. 221. 1975.

Top of the Page