ಸೈಝೀಸಿಯಂ ಮಲಬಾರಿಕಮ್ (Bedd.) Gamble - ಮಿರ್ಟೇಸಿ

ಪರ್ಯಾಯ ನಾಮ : ಯೂಜೀನಿಯ ಮಲಬಾರಿಕ Bedd.

Vernacular names : Malayalam: ಚಿಕ್ಕ ನೇರಳೆ, ಕುಂಟು ನೇರಳೆ

English   Kannada   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : 10 ಮೀ. ಎತ್ತರದವರೆಗೆ ಬೆಳೆಯುವ ಮರಗಳು.
ಕಾಂಡ ಮತ್ತು ತೊಗಟೆ : ತೊಗಟೆ ಬೂದು ಮಿಶ್ರಿತ ಕಂದು ಬಣ್ಣದಲ್ಲಿದ್ದು ನಯವಾಗಿರುತ್ತದೆ.
ಕವಲುಗಳು ಮತ್ತು ಕಿರುಕೊಂಬೆಗಳು : ಕಿರುಕೊಂಬೆಗಳು ದುಂಡಾಗಿ,ತೆಳುವಾಗಿದ್ದು ರೋಮರಹಿತವಾಗಿರುತ್ತವೆ.
ಎಲೆಗಳು : ಎಲೆಗಳು ಸರಳವಾಗಿದ್ದು ಅಭಿಮುಖವಾಗಿ ಜೋಡನೆಗೊಂಡಿದ್ದು ಕಾಂಡದ ಎರಡೂ ಕಡೆ ಎದುರು ಬದರಿನ ಲಂಬ ಸಾಲಿನಲ್ಲಿರುತ್ತವೆ;ತೊಟ್ಟುಗಳು 0.6-1.2 ಸೆಂ.ಮೀ. ಉದ್ದಹೊಂದಿದ್ದು ಕಾಲುವೆಗೆರೆ ಸಮೇತವಿರುತ್ತವೆ ಮತ್ತುರೋಮರಹಿತವಾಗಿರುತ್ತವೆ;ಪತ್ರಗಳು 5–12.5X2.5–6 ಸೆಂ.ಮೀ.ವರೆಗಿನ ಗಾತ್ರವಿದ್ದು ತಲೆಕೆಳಗಾದ ಅಂಡಾಕಾರದಿಂದ ಹಿಡಿದು ದುಂಡಾದ ಅಥವಾ ತಲೆಕೆಳಗಾದ ಹೃದಯದ ಆಕಾರ,ಚೂಪಾಲ್ಲದ ಅಥವಾ ದುಂಡಾದ ಅಗ್ರದಲ್ಲಿ ಕಚ್ಚುಳ್ಳ ತುದಿ, ಬೆಣೆ-ಒಳಬಾಗಿದ ಬುಡ,ನಯವಾದ ಅಂಚು ,ತೆಳುವಾದ ತೊಗಲನ್ನೋಲುವ ಮೇಲ್ಮೈ ಹೊದಿದ್ದು ಪ್ರಕಾಶ ಭೇಧ್ಯ ರಸಗ್ರಂಥಿ ಚುಕ್ಕೆಗಳ ಸಮೇತವಿದ್ದು ಕಾಗದವನ್ನೋಲುವ ಮೇಲ್ಮೈ ಹೊಂದಿದ್ದು;ಮಧ್ಯ ನಾಳ ಮೇಲ್ಭಾಗದಲ್ಲಿ ಕಾಲುವೆಗೆರೆ ಸಮೇತವಿರುತ್ತದೆ;ಅಂತರ ಅಂಚಿನ ನಾಳಗಳು ಇರುತ್ತವೆ;ಎರಡನೇ ದರ್ಜೆಯ ನಾಳಗಳು 8-12 ಜೋಡಿಗಳಿದ್ದು ಹೆಚ್ಚಿನ ಅಂತರದಲ್ಲಿರುತ್ತವೆ; ಮೂರನೇ ದರ್ಜೆಯ ನಾಳಗಳು ವಿಶಾಲ ಜಾಲ ಬಂಧ ನಾಳ ವಿನ್ಯಾಸದಲ್ಲಿರುತ್ತವೆ.
ಪುಷ್ಪಮಂಜರಿ / ಹೂಗಳು : ಪುಷ್ಪಮಂಜರಿಗಳು ಅಕ್ಷಾಕಂಕುಳಿನಲ್ಲಿ ಅಥವಾ ಎಲೆಯುದುರು ಗುರುತಿನ ಮೇಲಿರುತ್ತವೆ;ಹೂಗಳು ಬಿಳಿ ಬಣ್ಣದವು.
ಕಾಯಿ / ಬೀಜ : ಬೆರ್ರಿ ಫಲಗಳು ಗೋಳದ ಆಕಾರದಲ್ಲಿದ್ದು ಮುಕುಟದಲ್ಲಿ ಶಾಶ್ವತವಾಗಿ ಉಳಿಯುವ ಪುಷ್ಪಪಾತ್ರೆಯ ಸಮೇತವಿರುತ್ತವೆ.

ಜೀವಪರಿಸ್ಥಿತಿ :

900 ಮತ್ತು1600 ಮೀ. ನಡುವಿನ ಎತ್ತರದ ಪ್ರದೇಶಗಳಲ್ಲಿನ ತೇವಾಂಶದಿಂದ ಕೂಡಿದ ನಿತ್ಯ ಹರಿದ್ವರ್ಣ ಕಾಡುಗಳ ಅಥವಾ ಜೌಗುಳ್ಳ ಕಾಡುಗಳ ಒಳಛಾವಣಿಯಲ್ಲಿ ಈ ಪ್ರಭೇದ ಕಂಡುಬರುತ್ತದೆ.

ವ್ಯಾಪನೆ :

ಪಶ್ಚಿಮ ಘಟ್ಟದ ದಕ್ಷಿಣಭಾಗಕ್ಕೆ ಸೀಮಿತಗೊಂಡ ಈ ಪ್ರಭೇದ ಪೆರಿಯಾರ್ ಪ್ರದೇಶ,ಅಣ್ಣಾಮಲೈ, ವಯನಾಡು ವ್ಯಾಪಿಸಿದೆ.

ಗ್ರಂಥ ಸೂಚಿ :

Gamble, Fl. Madras 481(1340).1919;Gamble, Fl. Madras 1:480.1997(rep.ed.); Sasidharan, Biodiversity documentation for Kerala- Flowering Plants, part 6:178.2004.

Top of the Page