ವ್ಯಾಕ್ಸೀನಿಯಮ್ ನೀಲ್ಘೆರ್ರೆನ್ಸೆ Wt. - ವ್ಯಾಕ್ಸೀನಿಯೇಸಿ

:

Vernacular names : Tamil: ಮಲನಮರಂMalayalam: ಒಳ್ಳೆ ನಂಗು.

English   Kannada   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : ಸಣ್ಣ ಮರಗಳು.
ಕಾಂಡ ಮತ್ತು ತೊಗಟೆ : ತೊಗಟೆ ಕಂದು ಬಣ್ಣದಲ್ಲಿದ್ದು,ಅನಿಯತವಾದ ಚಕ್ಕೆ ರೂಪದಲ್ಲಿರುತ್ತದೆ;ಕಚ್ಚು ಮಾಡಿದ ಜಾಗ ಹಳದಿ ಛಾಯೆ ಹೊಂದಿರುತ್ತದೆ.
ಕವಲುಗಳು ಮತ್ತು ಕಿರುಕೊಂಬೆಗಳು : ಕಿರುಕೊಂಬೆಗಳು ದುಂಡಾಗಿರುದ್ದು, ಮೃದುತುಪ್ಪಳದ ಸಮೇತವಿರುತ್ತವೆ.
ಎಲೆಗಳು : ಎಲೆಗಳು ಸರಳವಾಗಿದ್ದು ಪರ್ಯಾಯ ಮತ್ತು ಸುತ್ತು ಜೋಡನಾ ವ್ಯವಸ್ಥೆಯಲ್ಲಿರುತ್ತವೆ; ತೊಟ್ಟುಗಳು ಅಂದಾಜು 0.3 ಸೆಂ.ಮೀ. ಉದ್ದವಿದ್ದು, ಅಡ್ಡ ಸೀಳಿದಾಗ ಸಪಾಟ ಪೀನ ಮಧ್ಯದ ಆಕಾರ ಹೊಂದಿರುತ್ತವೆ , ಎಳೆಯದಾಗಿದ್ದಾಗ ಸೂಕ್ಷ್ಮ ಮೃದುತುಪ್ಪಳದಿಂದ ಕೂಡಿರುತ್ತವೆ;ಪತ್ರಗಳು 4.5 - 10 X 1 –2.2 ಸೆಂ.ಮೀ. ಗಾತ್ರ, ಭರ್ಜಿಯಿಂದ ಚತುರಸ್ರ - ಭರ್ಜಿಯವರೆಗಿನ ಆಕಾರ ಹೊಂದಿದ್ದು, ಕ್ರಮೇಣ ಚೂಪಾಗುವ ತುದಿ, ಒಳಬಾಗಿರುವುದರಿಂದ ಬೆಣೆಯಾಕಾರದ ಬುಡ,ದುಂಡೇಣು - ಗರಗಸ ದಂತಿತವಾದ ಅಂಚು ಹೊಂದಿದ್ದು ,ರೋಮರಹಿತವಾಗಿರುತ್ತವೆ, ಮೇಲ್ಮೈ ತೊಗಲನ್ನೋಲುವ ಮಾದರಿಯಲ್ಲಿತ್ತದೆ,ಪತ್ರಗಳ ತಳಭಾಗದ ಮಧ್ಯ ನಾಳದ ಮೇಲೆ ರಸಗ್ರಂಥಿಗಳಿರುತ್ತವೆ; ಮಧ್ಯನಾಳ ಪತ್ರದ ಮೇಲ್ಭಾಗದಲ್ಲಿ ಮೇಲೆದ್ದಿರುತ್ತದೆ; ಎರಡನೇ ದರ್ಜೆಯ ನಾಳಗಳು 4 ರಿಂದ 6 ಜೋಡಿಗಳಿರುತ್ತವೆ; ಮೂರನೇ ದರ್ಜೆಯ ನಾಳಗಳು ವಿಶಾಲ ಜಾಲಬಂಧ ನಾಳ ವಿನ್ಯಾಸದಲ್ಲಿದ್ದು ಪ್ರಮುಖವಾಗಿರುವುದಿಲ್ಲ.
ಪುಷ್ಪಮಂಜರಿ / ಹೂಗಳು : ಪುಷ್ಪಮಂಜರಿ ಅಕ್ಷಾಕಂಕುಳಿನಲ್ಲಿ ಮತ್ತು ತುದಿಯಲ್ಲಿನ ಸಡಿಲವಾದ ಮಧ್ಯಾಭಿಸರ ಮಾದರಿಯವು; ಹೂಗಳು ಬಿಳಿಯಿಂದ ಗುಲಾಬಿವರೆಗಿನ ಬಣ್ಣದಲ್ಲಿರುತ್ತವೆ; ತೊಟ್ಟುಗಳು 0.7 ಸೆಂ.ಮೀ. ವರೆಗಿನ ಉದ್ದ ಹೊಂದಿರುತ್ತವೆ; ಪುಷ್ಪ ದಳಗಳ ಹೊರ ಮೇಲ್ಮೈ ಮೃದುತುಪ್ಪಳದಿಂದ ಕೂಡಿರುತ್ತವೆ.
ಕಾಯಿ / ಬೀಜ : ಬೆರ್ರಿಗಳು ನಯವಾಗಿದ್ದು,ಗೋಳಾಕಾರದಲ್ಲಿರುತ್ತವೆ;ಬೀಜಗಳ ಸಂಖ್ಯೆ ಹಲವಾರು.

ಜೀವಪರಿಸ್ಥಿತಿ :

1000 ಮತ್ತು 2100 ಮೀ. ನಡುವಿನ ಮಧ್ಯಮ ಮತ್ತು ಅತಿಎತ್ತರದ ಪ್ರದೇಶಗಳಲ್ಲಿನ ನೀರಿನ ಝರಿಗಳ ಹಾಗೂ ನಿತ್ಯ ಹರಿದ್ವರ್ಣ ಕಾಡುಗಳ ಅಂಚಿನಲ್ಲಿ ಈ ಸಸ್ಯ ಬೆಳೆಯುತ್ತದೆ.

ವ್ಯಾಪನೆ :

ನೈರುತ್ಯ ಪಶ್ಚಿಮ ಘಟ್ಟಕ್ಕೆ ಸೀಮಿತವಾದ ಈ ಪ್ರಭೇದ ದಕ್ಷಿಣ ಮತ್ತು ಮಧ್ಯ ಸಹ್ಯಾದ್ರಿಯಲ್ಲಿ ಕಂಡುಬರುತ್ತದೆ.

ಗ್ರಂಥ ಸೂಚಿ :

Wight, Calcutta J. Nat. Hist. 8: 173. 1847 & Wight, Ic. t. 1189; Gamble, Fl. Madras 2: 741. 1993 (re.ed.); Sasidharan, Biodiversity documentation for Kerala- Flowering Plants, part 6: 263. 2004.

Top of the Page